ಬೆಳಗಾವಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ…

48
firstsuddi

ಬೆಳಗಾವಿ : ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದೆ. ಮೇ 4ರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೆಡಿಕಲ್ ಕಾಲೇಜು ಚುನಾವಣೆ ವಿಚಾರದ ಹಿನ್ನೆಲೆಯಲ್ಲಿ ವಸತಿ ನಿಲಯದಲ್ಲಿ ಗಲಾಟೆ ನಡೆದಿದೆ. ಗಲಾಟೆಯಲ್ಲಿ ರಾಜಸ್ತಾನ ಮೂಲದ ಅಂತಿಮ ವರ್ಷದ ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬವರ ಮೇಲೆ 15 ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ 15 ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.

ತೀವ್ರ ಹಲ್ಲೆಯಿಂದ ಬುರಾರಾಮ್ ಅವರ ಮೂಗು, ಕಿರು ಬೆರಳಿಗೆ ಗಾಯಗಳಾಗಿವೆ. ಮೂಗಿನ ಶಸ್ತ್ರ ಚಿಕಿತ್ಸೆ ಸಲುವಾಗಿ ಬುರಾರಾಮ್ ರಾಜಸ್ಥಾನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಬಿಮ್ಸ್ ನಿರ್ದೇಶಕರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.