ಬೆಳ್ಳಂಬೆಳಗ್ಗೆ ಸರಣಿ ಅಪಘಾತ ; ಬಸ್, ಟೆಂಪೋ ನಡುವೆ ಸಿಲುಕಿ ಆಟೋ ಸಂಪೂರ್ಣ ಜಖಂ.

66
firstsuddi

ಬೆಂಗಳೂರು : ಬೆಳ್ಳಂಬೆಳಗ್ಗೆ ಮೈಸೂರು ರಸ್ತೆಯ ಸ್ಯಾಟ್ ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿ ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ವೇಳೆ ಆಟೋದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆಗೆ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಅರ್ಧಗಂಟೆಗಳ ಕಾಲ ಹರಸಾಹಸದ ಬಳಿಕ ಆಟೋ ಚಾಲಕನನ್ನು ಹೊರತೆಗೆಯಲಾಗಿದೆ. ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.

ಘಟನೆಯಿಂದಾಗಿ ಮೈಸೂರು ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.