ಹಾಸನ : ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಎಎಸ್ಪಿ ತಮ್ಮಯ್ಯ, ಡಿವೈಎಸ್ ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ 15 ಜನ ಪೊಲೀಸ್ ಅಧಿಕಾರಿಗಳು, 100ಕ್ಕೂ ಹೆಚ್ಚು ಪೊಲೀಸರು ಮುಂಜಾನೆ 5:45ರ ಸುಮಾರಿನಲ್ಲಿ ದಾಳಿ ನಡೆಸಿದ್ದಾರೆ.
ಮಾದಕ ವಸ್ತುಗಳ ಸೇವನೆ ಹಾಗೂ ಮೊಬೈಲ್ ಫೋನ್ ಗಳ ಬಳಕೆ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನಲೆ ಈ ದಾಳಿ ನಡೆಸಲಾಗಿದೆ. ಒಂದೂವರೆ ಗಂಟೆಗೂ ಹೆಚ್ಚು ಕಾಲ ಜೈಲಿನೊಳಗೆ ಶೋಧಕಾರ್ಯ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳ ಕೊಠಡಿಗಳ ತಪಾಸಣೆ ವೇಳೆ 2 ಮೊಬೈಲ್, ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿವೆ.










