ಬೆಳ್ಳಿ, ಚಿನ್ನ ನಾಣ್ಯಗಳಿಂದ ಜನಾರ್ದನ ರೆಡ್ಡಿ ತುಲಾಭಾರ – ಕೊರೊನಾ ರೂಲ್ಸ್ ಬ್ರೇಕ್…

55
firstsuddi

ಬಳ್ಳಾರಿ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಇಂದು 55ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೇ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಯಲ್ಲಿ ವಾಸ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ಅಭಿಮಾನಿಗಳು ಚಿನ್ನ ಹಾಗೂ ಬೆಳ್ಳಿ ನಾಣ್ಯಗಳಿಂದ ಮಾಜಿ ಸಚಿವ ಜನಾರ್ದನ ರೆಡ್ಡಿ ತುಲಾಭಾರ ಸೇವೆ ನಡೆಸಿದ್ದಾರೆ.

ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಜನಾರ್ದನ ರೆಡ್ಡಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ 55 ಬೆಳ್ಳಿ ನಾಣ್ಯ, 55 ಬಂಗಾರದ ನಾಣ್ಯ ಜೊತೆಗೆ ಐದು ರೂಪಾಯಿ ಮತ್ತು ಹತ್ತು ರೂಪಾಯಿ ನಾಣ್ಯದಿಂದ ತುಲಾಭಾರ ನಡೆಸಲಾಯಿತು. ಈ ವೇಳೆ ಸಾರಿಗೆ ಸಚಿವ ರಾಮುಲು, ಶಾಸಕ ಸೋಮಶೇಖರ್ ರೆಡ್ಡಿ ಉಪಸ್ಥಿತರಿದ್ದರು. ಆದರೆ ತುಲಾಭಾರ ಕಾರ್ಯಕ್ರಮದ ವೇಳೆ ಜನ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೊರೊನಾ ರೂಲ್ಸ್ ಉಲ್ಲಂಘಿಸಿದ್ದಾರೆ.