ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ…

55
firstsuddi

ಮಂಡ್ಯ : ತಮ್ಮ ಬೇಡಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ರೈತರು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದರು. ಈ ಸಂದರ್ಭ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ಕಳೆದ 10 ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ, ಹಾಲಿನ ದರ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ, ಇಂದು ರೈತರು ಮಂಡ್ಯದ ಸಂಜಯ್ ವೃತ್ತದಿಂದ ಕಬ್ಬಿನ ಟ್ರ್ಯಾಕ್ಟರ್ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ್ರು.

ಈ ವೇಳೆ ರೈತರ ಪಾಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸತ್ತಿವೆ ಎಂದು ಸಿಎಂ ಬೊಮ್ಮಾಯಿ ಅವರ ಅಣುಕು ಶವ ಯಾತ್ರೆ ಮಾಡಿದ್ರು. ರೈತರೊಂದಿಗೆ ಪೊಲೀಸರು ಶವಯಾತ್ರೆ ನಿಲ್ಲಿಸುವಂತೆ ವಾಗ್ವಾದ ನಡೆಸಿದ್ರು. ವಾಗ್ವಾದ ಹೆಚ್ಚಾಗುತ್ತಿದ್ದಂತೆ ರಸ್ತೆಯಲ್ಲೇ ಅಣಕು ಶವಕ್ಕೆ ಬೆಂಕಿ ಹಾಕಿ ರೈತರು ಆಕ್ರೋಶ ಹೊರಹಾಕಿದರು. ಬಳಿಕ ಜಿಲ್ಲಾಧಿಕಾರಿಯತ್ತ ಪ್ರತಿಭಟನಾ ಮೆರಣಿಗೆ ಮೂಲಕ ಬಂದ ರೈತರು, ಡಿಸಿ ಕಚೇರಿ ಬಳಿ ಹಾಕಿದ್ದ ಬ್ಯಾರಿಕೇಡ್ ನ್ನು ತಳ್ಳಿ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದರು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.