ಬೇಲೂರು ಚನ್ನಕೇಶವ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ…

155
firstsuddi

ಹಾಸನ : ಇಂದಿನಿಂದ ಬೇಲೂರಿನ ಐತಿಹಾಸಿಕ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಮಂಗಳವಾದ್ಯದೊಂದಿಗೆ ವಿಶೇಷ ಪುಜೆ ಸಲ್ಲಿಕೆ ಬಳಿಕ ದೇಗುಲದ ಬಾಗಿಲು ತೆರೆಯಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ದೇಗುಲದ ಕಾರ್ಯನಿರ್ವಾಹಣಾಧಿಕಾರಿ ವಿದ್ಯಲ್ಲತಾ ದ್ವಾರಬಾಗಿಲಿಗೆ ಪೂಜೆ ಸಲ್ಲಿಸಿದರು. ಬಳಿಕ ಚೆನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.