ಮಂಡ್ಯ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ. ನರಸಿಪುರ ತಾಲ್ಲೂಕಿನ ಮಲಿಯೂರು ಗ್ರಾಮದ ನಿವಾಸಿ ಮಹೇಶ್(29) ಹಾಗೂ ಮಾದೇಶ್(23) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೃತರು ಶುಕ್ರವಾರ ತಡರಾತ್ರಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು. ಈ ವೇಲೆ ಬುಗತಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದಿದ್ದು, ಪರಿಣಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಅಪರಿಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಮಳವಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.










