ಬೆಂಗಳೂರು : ಬೈಕ್‍ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೆರೆಕತ್ತಿಗನೂರು ಗ್ರಾಮದ ರಾಮಯ್ಯ (65) ಮೃತರು. ಈ ಅಪಘಾತದ ದೃಶ್ಯ ಸ್ಥಳೀಯ ಹೋಟೆಲ್ ನ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದಾಗಿ ಹೈವೆಯಲ್ಲಿ ಟ್ರಾಫಿಕ್ ಜಾಂ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










