ಬಳ್ಳಾರಿ : ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೌಲ್ ಬಜಾರ್ ಫ್ಲೈ ಓವರ್ ಮೇಲೆ ನಡೆದಿದೆ.
ಘಟನೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ಸಾವನ್ನಪ್ಪಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.










