ಬೈಕ್ ಹಾಗು ಟ್ರಾಕ್ಟಾರ್ ನಡುವೆ ಅಪಘಾತ: ಪ್ರಜಾವಾಣಿ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಸಾವು…

319
firstsuddi

ದಾವಣಗೆರೆ: ತಾಲ್ಲೂಕಿನ ಕೊಡಗನೂರು ಕೆರೆಯ ಬಳಿ ಬುಧವಾರ ರಾತ್ರಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ‘ಪ್ರಜಾವಾಣಿ’ಯ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಎಂ.ಸಿ. ಮಂಜುನಾಥ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳಲ್ಕೆರೆಯಲ್ಲಿರುವ ಅಕ್ಕನ ಮನೆಗೆ ಹಾವೇರಿಯಿಂದ ಮೋಟಾರ್ ಸೈಕಲ್ನಲ್ಲಿ ಹೋಗುತ್ತಿದ್ದಾಗ ಹುಲ್ಲಿನ ಹೊರೆ ಹೇರಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಎಂ.ರಾಜೀವ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗನೂರು ಪೊಲೀಸರು ತನಿಖೆ ನಡೆಸುತ್ತಿದ್ದು, ಅಪಘಾತ ಮಾಡಿ ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಮಂಜುನಾಥ್ ಅವರಿಗೆ ತಂದೆ, ತಾಯಿ ಹಾಗೂ ಅಣ್ಣ, ಅಕ್ಕ ಇದ್ದಾರೆ. ಅಂತ್ಯ ಸಂಸ್ಕಾರ ಗುರುವಾರ ಶಿವಮೊಗ್ಗದಲ್ಲಿ ನಡೆಯಲಿದೆ.