ರಾಯಚೂರು : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಎಂಬಲ್ಲಿ ನಡೆದಿದೆ. ಗದ್ದೆಪ್ಪ ಕುಣೆಕಲ್ಲೂರು(28) ಹಾಗೂ ಅಂದಪ್ಪ ಕುಣೆಕಲ್ಲೂರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಬೈಕ್‍ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










