ಬೊಮ್ಮಾಯಿ ನೂತನ ಸಂಪುಟ ರಚನೆ ; 29 ಸಚಿವರು ಪ್ರಮಾಣ ವಚನ ಸ್ವೀಕಾರ…

116
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು, 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಸುಮಾರು 75 ನಿಮಿಷಗಳ ಕಾಲ ಪ್ರಮಾಣ ವಚನ ಸಮಾರಂಭ ನಡೆಯಿತು. ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿಯೇ ಹಾಗೂ ದೇವರ ಹೆಸರಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ಒಂದು ವಿಶೇಷವಾದರೆ, ಮುರುಗೇಶ್ ನಿರಾಣಿ ಹಾಗೂ ಶಂಕರ್ ಪಾಟೀಲ್ ಮುನೇನ ಕೊಪ್ಪ ಅವರು ದೇವರ ಜೊತೆಗೆ ರೈತರ ಹೆಸರು ಸೇರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಅರೆಬೈಲ್ ಶಿವರಾಂ ಹೆಬ್ಬಾರ್ ಹಾಗೂ ಶಶಿಕಲಾ ಜೊಲ್ಲೆ ಅವರು ದೇವರ ಜೊತೆಗೆ ಕ್ಷೇತ್ರದ ಜನರ ಹೆಸರಲ್ಲೂ ಪ್ರಮಾಣ ಮಾಡಿದರು.