ಬ್ಯಾಂಕ್ ಹಣ ಅಕ್ರಮ ವರ್ಗಾವಣೆ – ಇಡಿಯಿಂದ ಜಮ್ಮು-ಕಾಶ್ಮೀರ ಮಾಜಿ ಸಿಎಂ ವಿಚಾರಣೆ…

71
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ್ ಬ್ಯಾಂಕ್ ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ.

ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ, ತನಿಖೆಗೆ ಸಂಬಂಧಿಸಿದಂತೆ ಅವರ ಹಾಜರಾತಿ ಅಗತ್ಯ ಎಂಬ ಆಧಾರದ ಮೇಲೆ ಫೆಡರಲ್ ಏಜೆನ್ಸಿಯಿಂದ ಅಬ್ದುಲ್ಲಾ ಅವರನ್ನು ದೆಹಲಿಗೆ ಕರೆಸಲಾಯಿತು ಎಂದು ಹೇಳಿದೆ.

ಜಮ್ಮು-ಕಾಶ್ಮೀರ ಬ್ಯಾಂಕ್ ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ 2021ರಲ್ಲಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಮುಷ್ತಾಕ್ ಅಹ್ಮದ್ ಶೇಖ್ ಮತ್ತು ಇತರರ ವಿರುದ್ಧ ಸಾಲ ಹಾಗೂ ಹೂಡಿಕೆಗಳ ಮಂಜೂರಾತಿಯಲ್ಲಿ ಅಕ್ರಮಗಳ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿತ್ತು. ಬ್ಯಾಂಕ್ ನಲ್ಲಿ 180 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು.