ಉಡುಪಿ : ಬ್ರಹ್ಮಗಿರಿ ವೃತ್ತದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಿಸುವಂತೆ ನಗರಸಭೆಗೆ ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಪತ್ರವನ್ನು ಬರೆದಿದ್ದಾರೆ.
ಪ್ರತ್ರದಲ್ಲಿ ಏನಿದೆ?
ಉಡುಪಿ ನಗರಸಭೆ ಅಜ್ಜರಕಾಡು ವ್ಯಾಪ್ತಿಯ ಬ್ರಹ್ಮಗಿರಿ ವೃತ್ತದಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿ ಹೋರಾಟ ನಡೆಸಿದ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ರವರ ಪುತ್ಥಳಿ ನಿರ್ಮಿಸಿ ವೀರ ಸಾವರ್ಕರ್ ಗೆ ಸಮಸ್ತ ದೇಶಪ್ರೇಮಿಗಳ ಪರವಾಗಿ ಗೌರವ ಸಲ್ಲಿಸಲು ನಿರ್ಧರಿಸಿದ್ದೇವೆ.
ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳನ್ನು ಪೊರೈಸಿರುವ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನರಾಗಿದ್ದ ವೀರ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅತ್ಯಂತ ಸಮಂಜಸ ಸಮಯ ಬಂದೊದಗಿದ್ದು ತಾವು ನಗರಸಭೆಯ ಮೂಲಕ ಪುತ್ಥಳಿ ಅಳವಡಿಸಲು ಅನುಮತಿ ನೀಡುವಂತೆ ಪ್ರತ್ರದಲ್ಲಿ ಮನವಿ ಮಾಡಿದ್ದಾರೆ.










