ಬ್ರಿಟನ್‍ನಿಂದ ಚಿಕ್ಕಮಗಳೂರಿಗೆ ಆಗಮಿಸಿದ ಇಬ್ಬರಿಗೆ ಕೊರೊನಾ ಪಾಸಿಟಿವ್-ಡಾ. ಬಗಾದಿ ಗೌತಮ್.

122
firstsuddi

ಚಿಕ್ಕಮಗಳೂರು : ಬ್ರಿಟನ್‍ನಿಂದ ನಗರಕ್ಕೆ ಆಗಮಿಸಿದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ದೃಢವಾಗಿರುವ ಬಗ್ಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಕ್ಕೆ ಈವರೆಗೆ 18 ಮಂದಿ ಬ್ರಿಟನ್‍ನಿಂದ ಆಗಮಿಸಿದ್ದು, ಅವರಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದವರದ್ದು ನೆಗೆಟಿವ್ ಎಂದು ವರದಿಯಾಗಿದೆ. ಪಾಸಿಟಿವ್ ವರದಿ ಬಂದವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.