ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಬ್ರಿಟನ್ ರಾಣಿ ಎಲಿಜಬೆತ್- II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮತ್ತು ಭಾರತದ ಪರವಾಗಿ ಸಂತಾಪ ಸಲ್ಲಿಸಲು ಲಂಡನ್ಗೆ ಭೇಟಿ ನೀಡಲಿದ್ದಾರೆ.
ಬ್ರಿಟನ್ ರಾಣಿ ಎಲಿಜಬೆತ್- II ಅವರು ಸೆಪ್ಟೆಂಬರ್ 8, 2022 ರಂದು ನಿಧನರಾದರು. ಲಂಡನ್ ನ ವೆಸ್ಟ್ ಮಿನಿಸ್ಟರ್ ಅಬೆಯಲ್ಲಿ ಸೆಪ್ಟೆಂಬರ್ 19(ಸೋಮವಾರ) ರಂದು ರಾಣಿಯ ಅಂತ್ಯಕ್ರಿಯೆ ನಡೆಯಲಿದೆ. ರಾಣಿಯ ಶವಪೆಟ್ಟಿಗೆಯನ್ನು ವಿಂಡ್ಸರ್ ಕ್ಯಾಸಲ್ ಗೆ ಕೊಂಡೊಯ್ಯುವ ಮೂಲಕ 6ನೇ ಕಿಂಗ್ ಜಾರ್ಜ್ ಸ್ಮಾರಕ ಪ್ರಾರ್ಥನಾ ಮಂದಿರದಲ್ಲಿ ಅವರ ತಂದೆ 5ನೇ ಜಾರ್ಜ್ ಅವರ ಸಮಾಧಿಯ ಪಕ್ಕದಲ್ಲಿ ರಾಣಿಯನ್ನು ಸಮಾಧಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.










