ನವದೆಹಲಿ : ಬ್ರಿಟನ್ ರಾಣಿ ಎಲಿಜಬೆತ್-II ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಬ್ರಿಟನ್ ರಾಣಿ ಎಲಿಜಬೆತ್-II ಅವರು ಸೆಪ್ಟೆಂಬರ್ 8ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವಾರ್ಥವಾಗಿ ಭಾರತ ಸರ್ಕಾರ ಸೆಪ್ಟೆಂಬರ್ 11 ರಂದು 1 ದಿನದ ಶೋಕಾಚರಣೆ ನಡೆಸಲು ನಿರ್ಧರಿಸಿದೆ ಎಂದು ಗೃಹಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ತಮ್ಮ 96 ನೇ ವಯಸ್ಸಿನಲ್ಲಿ ನಿನ್ನೆ ರಾತ್ರಿ ಸ್ಕಾಟ್ಲೆಂಡ್ ನ ಅರಮನೆಯಲ್ಲಿ ನಿಧನರಾಗಿದ್ದಾರೆ. 1923ರಿಂದ ಬ್ರಿಟನ್ ನ ರಾಣಿಯಾಗಿದ್ದರು.










