ಶಿವಮೊಗ್ಗ : ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ 4 ದಿನ ಹಸುಗೂಸನ್ನು ಝೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ದೇವೇಂದ್ರ ಹಾಗೂ ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮಗುವಿಗೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಹಂತದಲ್ಲಿರುವಾಗ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆ ಮಗುವನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ಹೀಗಾಗಿ ಶಿವಮೊಗ್ಗ ಎಸ್‍ಪಿ ಕೆ.ಎಂ ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಶಿವಮೊಗ್ಗದಿಂದ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ.










