ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ – ಓರ್ವ ಆರೋಪಿ ಪೊಲೀಸರ ವಶಕ್ಕೆ…

89
firstsuddi

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.

ದೊಡ್ಡಪೇಟೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನೂ ನಾಲ್ವರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ನಡೆದಿದೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.