“ಭಜರಂಗಿ-2” ಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ಬಸ್ ಅಪಘಾತ…

472
firstsuddi

ಬೆಂಗಳೂರು : “ಭಜರಂಗಿ-2” ಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೆಲಮಂಗಲ ಸಮೀಪದ ಮೋಹನ್ ಬಿ.ಕೆರೆ ಸ್ಟುಡಿಯೋ ಬಳಿ ನಡೆದಿದೆ. ಬಸ್‍ನಲ್ಲಿ ಎಂದಿನಂತೆ 60ಕ್ಕೂ ಹೆಚ್ಚು ಮಂದಿ ಕಲಾವಿದರು ಚಿತ್ರೀಕರಣಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಬಸ್ ಬಿ.ಕೆರೆ ಸ್ಟುಡಿಯೋ ಬಳಿ ತೆರಳುವಾಗ ಮೊದಲು ಕಾರಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಸ್ ಮೇಲೆಯೇ ಬಿದ್ದಿದ್ದು, ಅದೃಷ್ಠವಶಾತ್ ಬಸ್‍ನಲ್ಲಿದ್ದ ಕಲಾವಿದರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.