ಭದ್ರತಾ ಪಡೆಗಳ ಗುಂಡಿನ ದಾಳಿಗೆ ಐವರು ಉಗ್ರರು ಬಲಿ…

82
firstsuddi

ಶ್ರೀನಗರ : ಭದ್ರತಾ ಪಡೆಗಳ ಗುಂಡಿನ ದಾಳಿಗೆ ಐವರು ಉಗ್ರರು ಬಲಿಯಾದ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೊಂಬೈ ಮತ್ತು ಗೋಪಾಲ್ ಪೋರಾ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಟಿಆರ್ ಎಫ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ. ಪೊಂಬೈಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದರೆ, ಗೋಪಾಲ್ ಪೋರಾದಲ್ಲಿ ಇಬ್ಬರು ಹತರಾಗಿದ್ದಾರೆ.

ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎನ್ ಕೌಂಟರ್ ಗಳು ಮುಂದುವರೆದಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.