ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ-ಐವರು ಉಗ್ರರು ಖತಂ…

189
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಯೋಧರು ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದಲ್ಲಿ ಕೆಲವು ಉಗ್ರರು ಅಡಗಿಕುಳಿತಿದ್ದಾರೆ ಎಂಬ ಮಾಹಿತಿಯನ್ನು ತಿಳಿದ ಭದ್ರತಾ ಪಡೆಗಳು ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಮೂವರು ಉಗ್ರರನ್ನು ಹೊಡೆದುರುಳಿಸಿದ ಯೋಧರು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿ ಈಗಾ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಮೃತಪಟ್ಟ ಉಗ್ರರ ಗುರುತನ್ನು ಪತ್ತೆಹಚ್ಚುವ ಕಾರ್ಯ ನಡೆಸುತ್ತಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.