ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ – ಇಬ್ಬರು ನಕ್ಸಲರ ಹತ್ಯೆ…

65
firstsuddi

ರಾಯ್ಪುರ: ಇಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಪಡೆಯ ಒಂದು ಘಟಕವಾದ ಜಿಲ್ಲಾ ರಿಸರ್ವ್ ಗಾರ್ಡ್ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಂದರ್ಭ ಕೊಯಲಿಬೀಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗುಂಡಿನ ಚಕಮಕಿ ಸಂಭವಿಸಿದೆ ಎಂದು ಇನ್ಸ್‍ಪೆಕ್ಟರ್ ಜನರಲ್ ತಿಳಿಸಿದ್ದಾರೆ.

ಘಟನೆಯ ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಇನ್ಸಾಸ್ ರೈಫಲ್ ಒಂದು, 12 ಬೋರ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.