ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು…

59
firstsuddi

ಶಿವಮೊಗ್ಗ: ಸಿಡಿಲು ಬಡಿದು ಸಹೋದರರಿಬ್ಬರು ಸಾವಿಗೀಡಾದ ಘಟನೆ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‍ನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಬೀರು (32) ಹಾಗೂ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ನಿನ್ನೆ ರಾತ್ರಿ, ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.