ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ…

135
firstsuddi

ಶಿವಮೊಗ್ಗ : ಮಹಾಮಾರಿ ಕೊರೊನಾ ವೈರಸ್‍ನಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ(67) ನಿಧನರಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಪ್ಪಾಜಿ ಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಕೊರೊನಾ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಬಂದಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅವರು ನಿಧನರಾಗಿದ್ದಾರೆ. ವಿಐಎಸ್‍ಎಲ್ ನೌಕರರಾಗಿ ಜೀವನ ಆರಂಭಿಸಿದ ಅಪ್ಪಾಜಿ ಗೌಡ ಅವರು ಕಾರ್ಮಿಕ ನಾಯಕರಾಗಿ ಬೆಳೆದು ಬಳಿಕ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು.