ನವದೆಹಲಿ : ಭಯೋತ್ಪಾದಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು- ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸೀನ್ ಮಲಿಕ್ ದೋಷಿ ಎಂದು ಎನ್ ಐಎ ಕೋರ್ಟ್ ತೀರ್ಪು ಪ್ರಕಟಿಸಿದೆ.
ಅಲ್ಲದೇ, ಆರ್ಥಿಕ ಸ್ಥಿತಿ-ಗತಿ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಅಪರಾಧಿ ಯಾಸೀನ್ ಗೆ ಕೋರ್ಟ್ ಸೂಚಿಸಿದೆ. ಪ್ರಕರಣ ಸಂಬಂಧ ಶಿಕ್ಷೆಯನ್ನು ಮೇ.25ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು ಸೇರಿದಂತೆ ಎಲ್ಲ ಆರೋಪಗಳಲ್ಲಿಯೂ ತಾನು ತಪ್ಪಿತಸ್ಥ ಎಂದು ಮೇ 10ರಂದು ಮಲಿಕ್ ತಪ್ಪೊಪ್ಪಿಗೆ ನೀಡಿದ್ದ. 2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದ ಚಟುವಟಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.










