ಹಾವೇರಿ : ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್‌ನಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ಬಂಧಿತ ಆರೋಪಿಗಳು.
ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಅರಿತ ಪೊಲೀಸರು, ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋದರೂ ಬಿಡದೇ ಚೇಜ್ ಮಾಡಿ, ಹಿಡಿದಿದ್ದಾರೆ. ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್ ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.










