ಭರ್ಜರಿ ಜಯ – 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ…

66
firstsuddi

ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.

ಈ ಬಗ್ಗೆ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದು, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ವಿಜಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಅಭಿನಂದಿಸಿದ್ದಾರೆ. ಗುಜರಾತ್ ನ ಜನರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಸಿಎಂ ಅಭ್ಯರ್ಥಿ ಭೂಪೇಂದ್ರ ಪಟೇಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಗಿಂತ ಸುಮಾರು 1.16 ಲಕ್ಷ ಮತಗಳ ಅಂತರದಲ್ಲಿ ಘಟ್ಲೋಡಿಯಾ ಕ್ಷೇತ್ರದಿಂದ ಸತತ 2ನೇ ಬಾರಿಗೆ ಗೆದ್ದಿದ್ದಾರೆ. ಭೂಪೇಂದ್ರ ಪಟೇಲ್ ಅವರು 2017ರಲ್ಲಿ 1.17 ಲಕ್ಷ ಮತಗಳ ಭಾರೀ ಅಂತರದಿಂದ ಈ ಸ್ಥಾನವನ್ನು ಗೆದ್ದಿದ್ದರು.