ಬರ್ಮಿಂಗ್‌ಹ್ಯಾಮ್ : ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಮತ್ತೊಂದು ಪದಕ ಸಾಧನೆ ಮಾಡಿದೆ. ಪುರುಷರ 109 ಕೆಜಿ ತೂಕ ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಕಂಚು ಗೆದ್ದಿದ್ದಾರೆ.
ಲವ್‌ಪ್ರೀತ್ ಸಿಂಗ್ ಒಟ್ಟು 355 ಕೆಜಿ ವೇಟ್ ಲಿಫ್ಟ್ ಮಾಡುವ ಮೂಲಕ ಕಂಚಿಗೆ ಮುತ್ತಿಕ್ಕಿದರು. ಸ್ನ್ಯಾಚ್ ವಿಭಾಗದಲ್ಲಿ 163 ಕೆಜಿ ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 192 ಕೆ.ಜಿ ಭಾರವನ್ನು ಎತ್ತಿದರು.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಒಟ್ಟು 14 ಪದಕಗಳನ್ನು ಗೆದ್ದಿದ್ದು ಪದಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.










