ಭಾರತದಲ್ಲಿ ಓಮಿಕ್ರಾನ್‍ಗೆ ಮೊದಲ ಬಲಿ…

70
firstsuddi

ಜೈಪುರ : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‍ಗೆ ಮೊದಲ ಬಲಿಯಾದ ಬಗ್ಗೆ ವರದಿಯಾಗಿದೆ.

ರಾಜಸ್ಥಾನದ ಉದಯ್ ಪುರದ 73 ವರ್ಷದ ವ್ಯಕ್ತಿಯೊಬ್ಬರು ಓಮಿಕ್ರಾನ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ಹೊರಬಿದ್ದಿದೆ.

ಓಮಿಕ್ರಾನ್ ಸೋಂಕಿತ ವ್ಯಕ್ತಿ ಉದಯ್ಪುರದ ಮಹಾರಾಣಾ ಭೂಪಾಲ್ ಆಸ್ಪತ್ರೆಗೆ ಡಿಸೆಂಬರ್ 15 ರಂದು ದಾಖಲಾಗಿದ್ದರು. ಬಳಿಕ 2 ಬಾರಿ ಕೊರೊನಾ ಟೆಸ್ಟ್ ನಡೆಸಿದ ವೇಳೆ ಕೊರೊನಾ ನೆಗೆಟಿವ್ ವರದಿಯಾಗಿತ್ತು. ಆದರೆ ಜಿನೋಮ್ ಸೀಕ್ವೆನ್ನಲ್ಲಿ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿತ್ತು. ಮಧುಮೇಹದಂತಹ ಕೊಮೊರ್ಬಿಡಿಟಿ ಕಾಯಿಲೆ ಕೂಡ ಇದ್ದುದರಿಂದ ಓಮಿಕ್ರಾನ್‍ಗೆ ಚಿಕಿತ್ಸೆ ಫಲಿಸದೆ ಡಿಸೆಂಬರ್ 31 ರಂದು ಸೋಂಕಿತ ವ್ಯಕ್ತಿ ಮರಣ ಹೊಂದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಹಿತಿ ನೀಡಿದ್ದು, ತಾಂತ್ರಿಕವಾಗಿ ಇದು ಓಮಿಕ್ರಾನ್ ಸಂಬಂಧಿತ ಸಾವು. ಅವರಿಗೆ ಮಧುಮೇಹದಂತಹ ಕೊಮೊರ್ಬಿಡಿಟಿ ಕೂಡ ಇತ್ತು. ಜೊತೆಗೆ ಓಮಿಕ್ರಾನ್ ಸೋಂಕು ಕಂಡುಬಂದ ಬಳಿಕ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.