ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಜನರು ಸಾವು : ವಿಶ್ವ ಆರೋಗ್ಯ ಸಂಸ್ಥೆ ವರದಿ…

136
firstsuddi

ನವದೆಹಲಿ : ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 47 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ(ಡಬ್ಲ್ಯೂಹೆಚ್‍ಒ) ಸಂಸ್ಥೆ ವರದಿ ಮಾಡಿದೆ.

ಡಬ್ಲ್ಯೂಹೆಚ್‍ಒ ಬಿಡುಗಡೆಯಾದ ವರದಿಯಲ್ಲಿ 2020ರ ಜನವರಿ ಮತ್ತು 2021ರ ಡಿಸೆಂಬರ್ ಅವಧಿಯಲ್ಲಿ ಭಾರತದಲ್ಲಿ ಕೋವಿಡ್-19 ಸೋಂಕಿನಿಂದ 4.7 ಮಿಲಿಯನ್​ಗೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಿತ್ತು. ಇದು ವಾಸ್ತವ ಅಂಕಿ-ಅಂಶಗಳಿಗೆ ಹೋಲಿಸಿದರೆ 10 ಪಟ್ಟು ಹೆಚ್ಚಾಗಿದೆ.

ಕೋವಿಡ್ ಸಾವುಗಳಿಗೆ ಸಂಬಂಧಿಸಿದ ಡಬ್ಲ್ಯೂಎಚ್ ಒ ವರದಿಯನ್ನು ಕೇಂದ್ರ ಸರ್ಕಾರ ಆಕ್ಷೇಪಿಸಿದೆ. ಸಾವಿನ ಪ್ರಮಾಣ ಅಂದಾಜಿಸುವ ಡಬ್ಲ್ಯೂಎಚ್ ಒ ಮಾದರಿಯನ್ನು ಭಾರತ ನಿರಂತರವಾಗಿ ಆಕ್ಷೇಪಿಸುತ್ತಿದ್ದು, ಈ ನಡುವೆಯೂ ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶ ಸಂಗ್ರಹದ ವ್ಯವಸ್ಥೆಯು ಸಂಖ್ಯಾಶಾಸ್ತ್ರೀಯವಾಗಿ ಮತ್ತು ವೈಜ್ಞಾನಿಕವಾಗಿ ಅಸ್ಪಷ್ಟ ಹಾಗೂ ಪ್ರಶ್ನಾರ್ಹವಾಗಿದೆ. ಈ ಅಂಕಿ-ಸಂಖ್ಯೆಗಳು ವಾಸ್ತವ ಚಿತ್ರಣದಿಂದ ಸಂಪೂರ್ಣ ಭಿನ್ನವಾಗಿದೆ. ದೇಶವು ಜನನ-ಮರಣ ನೋಂದಣಿಗೆ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರತಿಪಾದಿಸಿದೆ.