ಭಾರತದಲ್ಲಿ ನಿನ್ನೆ ಒಂದೇ ದಿನ 149 ಹೊಸ ಕೊರೊನಾ ಪ್ರಕರಣ ದಾಖಲು-873 ಕ್ಕೆ ಏರಿದ ಸೋಂಕಿತರ ಸಂಖ್ಯೆ…

201
firstsuddi

ನವದೆಹಲಿ : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಈಗಾ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದು, ಇತ್ತ ಭಾರತದಲ್ಲಿ ನಿನ್ನೆ ಒಂದೇ ದಿನ 149 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 873ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನೇ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದರೂ, ಕೆಲವು ಕಡೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದು, ಇನ್ನಾದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾಗಿದೆ.
ಭಾರತದಲ್ಲಿ ಈವರೆಗೂ 873 ಪ್ರಕರಣಗಳಲ್ಲಿ, 19 ಮಂದಿ ಕೊರೊನಾಗೆ ಬಲಿಯಾಗಿದ್ದು, 775 ಸೋಂಕಿತರು ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ 78 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.