ಭಾರತದಲ್ಲಿ ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

43
firstsuddi

ನವದೆಹಲಿ : 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿಯನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಮುಖಂಡ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ನಮಗೆ ಸೆನ್ಸಾರ್ ಶಿಪ್ ವಿಧಿಸಲು ನೀವು ಹೇಳುತ್ತಿದ್ದಾರಾ? ನ್ಯಾಯಾಲಯವು ಸೆನ್ಸಾರ್ ಶಿಪ್ ವಿಧಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

2002ರಲ್ಲಿ ಸಂಭವಿಸಿದ್ದ ಗುಜರಾತ್ ಹಿಂಸಾಚಾರ ಕುರಿತ India: The Modi Question ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡದಂತೆ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಅರ್ಜಿದಾರರು ಸುಪ್ರೀಂಕೋರ್ಟ್ ನಲ್ಲಿ ಮನವಿ ಮಾಡಿದರು. ಬಿಬಿಸಿ ಸತ್ಯಕ್ಕೆ ದೂರವಾದ ಮತ್ತು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯ ಮೇಲೆ ದಾಳಿ ಮಾಡುವ ಪಟ್ಟಭದ್ರ ಹಿತಾಸಕ್ತಿ ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.