ಭಾರತದಲ್ಲಿ ಮುಸ್ಲಿಮರು ಚೆನ್ನಾಗಿಯೇ ಇದ್ದಾರೆ : ಪಾಶ್ಚಿಮಾತ್ಯ ರಾಷ್ಟ್ರಗಳ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ…

56
firstsuddi

ವಾಷಿಂಗ್ಟನ್ : ಭಾರತದಲ್ಲಿ ಮುಸ್ಲಿಮರು ಪಾಶ್ಚಿಮಾತ್ಯರ ಗ್ರಹಿಕೆಗಿಂತ ಚೆನ್ನಾಗಿಯೇ ಇದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿನ್ನೆ ವಾಷಿಂಗ್ಟನ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತವು ವಿಶ್ವದ ಎರಡನೇ ಅತಿದೊಡ್ಡ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಮುಸ್ಲಿಂ ಸಮುದಾಯದ ಜನಸಂಖ್ಯೆಯೂ ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸರ್ಕಾರದ ಬೆಂಬಲದಿಂದ ಅವರ ಜೀವನ ಇಷ್ಟು ಕಷ್ಟವಾಗಿದ್ದರೆ, 1947 ರಿಂದ ಅವರ ಜನಸಂಖ್ಯೆ ಇಷ್ಟು ಹೆಚ್ಚಾಗುತ್ತಿತ್ತೇ? ಎಂದು ಪ್ರಶ್ನಿಸಿದ್ದಾರೆ.

ಅತ್ತ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸ್ಥಿತಿ ಹದಗೆಡುತ್ತಿದೆ ಮತ್ತು ಅವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾಡಲಾಗುತ್ತದೆ, ಅದಕ್ಕೆ ಮರಣದಂಡನೆಯಂತಹ ಶಿಕ್ಷೆಯನ್ನು ನೀಡಲಾಗುತ್ತದೆ ಎಂದರು.