ಭಾರತೀಯ ಕಲೆ, ಸಾಹಿತ್ಯ ,ಸಂಗೀತ ಮತ್ತು ಸಂಸ್ಕೃತಿಗೆ ಮೂಲ ಆಧಾರವೇ ಜಾನಪದ.

33

ಚಿಕ್ಕಮಗಳೂರು: ಭಾರತೀಯ ಕಲೆ. ಸಾಹಿತ್ಯ. ಸಂಗೀತ ಮತ್ತು ಸಂಸ್ಕೃತಿಗೆ ಮೂಲ ಆಧಾರ ಜಾನಪದ ಎಂದು ಕಡೂರು ಎಪಿಎಂಸಿ ಮಾಜಿ ಅಧ್ಯಕ್ಷ ಎಂ. ರಾಜಣ್ಣ ಹೇಳಿದರು. ಕಡೂರು ತಾಲೂಕಿನ ಗರ್ಜೆ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ ಭಾನುವಾರ ಏರ್ಪಡಿಸಿದ್ದ ಜಾನಪದ ಕಲೆಗಳ ತರಬೇತಿ ಕಾರ್ಯಾಗಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾನಪದ ಗ್ರಾಮೀಣ ಜನರ ಬದುಕಿನ ಜೀವಾಳ. ಜಾನಪದವಿಲ್ಲದೆ ರೈತರು. ಕೃಷಿಕರ ಬದುಕಿಲ್ಲ ಎಂದ ಅವರು ಭಾರತೀಯ ಕಲೆ ಸಾಹಿತ್ಯ ಸಂಗೀತ ಮತ್ತು ಸಂಸ್ಕೃತಿ ಉಳಿದು ಬೆಳೆಯಬೇಕಾದರೆ ಜಾನಪದ ಉಳಿಯಬೇಕು ಎಂದು ಕಿವಿಮಾತು ಹೇಳಿದರು. ಇಂದಿನ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಿಂದ ಹೊರ ಬರಬೇಕು. ನಮ್ಮ ಹಿರಿಯರು ಬಳುವಳಿಯಾಗಿ ನೀಡಿರುವ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಹಾಗಾದಾಗ ಮಾತ್ರ ಅದು ಮುಂದಿನ ತಲೆಮಾರಿಗೆ ಉಳಿಯುತ್ತದೆ ಎಂದರು. ಗರ್ಜೆ ಗ್ರಾಮದ ಜಾನಪದ ಕಲಾವಿದರಿಂದ ಜ 14 ರಂದು ನಡೆಯಲಿರುವ ದೇವಿ ಮಹಾತ್ಮೆ ನಾಟಕದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ. ಬಿ. ಸುರೇಶ್ ಇಂದಿನ ಯುವಜನತೆಯಲ್ಲಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕ ಜಾ ಪ ಹಳ್ಳಿ ಹಳ್ಳಿಗಳಲ್ಲಿ ಜಾನಪದ ಕಲೆಗಳ ತರಬೇತಿ ಕಾರ್ಯಗಾರವನ್ನು ನಡೆಸುತ್ತಿದೆ ಎಂದು ತಿಳಿಸಿದರು. ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಮಹಿಳೆಯರಿಂದ ಮಾತ್ರ ಸಾಧ್ಯ ಎಂದ ಅವರು ಮಹಿಳೆಯರು ಆ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ಕಡೂರು ತಾಲೂಕು ಅಧ್ಯಕ್ಷ ಜಗದೀಶ್ವರಾಚಾರ್ ಮಾತನಾಡಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಲು ಮಹಿಳೆಯರು ಮುಂದಾಗಬೇಕು ಎಂದು ಹೇಳಿದರು. ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ಉಪನ್ಯಾಸ ನೀಡಿದ ಅಜ್ಜಂಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಎನ್.ಎಸ್. ಆನಂದ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜಾನಪದ ಪ್ರಮುಖ ಪಾತ್ರ ವಹಿಸಿತ್ತು. ಜಾನಪದದ ಹಾಡುಗಳ ಮೂಲಕ ಜನರನ್ನು ಆಗ ಜಾಗೃತಿಗೊಳಿಸಲಾಗುತ್ತಿತ್ತು ಎಂದು ತಿಳಿಸಿದರು. ಜಾನಪದ ಗಾಯಕ ಪಂಚನಹಳ್ಳಿ ಲೋಕೇಶ್ ಶಿಬಿರದಲ್ಲಿ ಗಾಯನ ತರಬೇತಿ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಂಡ ಸಂಜೀವ್. ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ. ಕಲಾಮಂಡಳಿಯ ಧನಂಜಯ. ಜಯಣ್ಣ. ಶಿವಣ್ಣ. ಗಿರೀಶ್ ಉಪಸ್ಥಿತರಿದ್ದರು.