ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಮರುನೇಮಕ…

62
firstsuddi

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ಮುಂದಿನ ಮೂರು ವರ್ಷಗಳವರೆಗೆ ಮರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

2024ರ ಡಿಸೆಂಬರ್ ವರೆಗೆ ಅಥವಾ ಮುಂದಿನ ಆದೇಶದವರೆಗೂ ಆರ್‌ಬಿಐ ಗವರ್ನರ್ ಆಗಿ ಶಕ್ತಕಾಂತ್ ದಾಸ್ ಮರು ನೇಮಕಕ್ಕೆ ಸಂಪುಟ ನೇಮಕಾತಿ ಸಮಿತಿಯ ಅನುಮೋದನೆ ನೀಡಿದೆ.

ಶಕ್ತಿಕಾಂತ್ ದಾಸ್ ಅವರು 2018ರ ಡಿಸೆಂಬರ್ ನಲ್ಲಿ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು.