ಭಾರತೀಯ ಸೇನಾ ಕಾರ್ಯಾಚರಣೆ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರ ಹತ್ಯೆ…

126
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್ ನಲ್ಲಿ ಭದ್ರತಾ ಪಡೆಗಳು ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಪ್ವಾರಾ ಜಿಲ್ಲೆಯಲ್ಲಿ ನಿನ್ನೆ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹಡೆದುರುಳಿಸಲಾಗಿದೆ. ಈ ಇಬ್ಬರು ಉಗ್ರರು ಏಪ್ರಿಲ್ 18ರಂದು ಸೊಪೋರ್ ನಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಮೂವರು CRPF ಯೋಧರನ್ನು ಹಾಗೂ ಮೇ 4ರಂದು ಹಂದ್ವಾರದಲ್ಲಿ ಮೂವರು CRPF ಯೋಧರನ್ನು ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಐಜಿಪಿ ವಿಜಯ್ ಕುಮಾರ್ ಅವರು ತಿಳಿಸಿದ್ದಾರೆ.