ಇಟಾನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಪತನಗೊಂಡಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ ನೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದಾರೆ.
ಇಬ್ಬರು ಪೈಲಟ್ ಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.










