ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ – ಕೈ ನಾಯಕರ ವಿರುದ್ಧ ದೂರು ದಾಖಲು…

62
firstsuddi

ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿದೆ.

ಬಿಜೆಪಿ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಹಾಗೂ ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬಲೆ ಹಾಗೂ ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ನವೆಂಬರ್ 25 ರಂದು ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್ ಅವರು ತಮ್ಮ ಅಧಿಕೃತ ಹ್ಯಾಂಡಲ್ ನಿಂದ ಮಧ್ಯಪ್ರದೇಶದ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಹೇಳಲಾದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಇದು ಜನರ ಭಾವನೆಗಳಿಗೆ ಧಕ್ಕೆಯುಂಟುಮಾಡಲಾಗಿದೆ ಎಂದು ಕಾಂಗ್ರೆಸ್ ನ ಕಾನೂನು ವಿಭಾಗಕ್ಕೆ ಸೇರಿದ ವಕೀಲ ಅಂಕಿತ್ ಮಿಶ್ರಾ ಅವರು ಮಧ್ಯಪ್ರದೇಶ ಘಟಕದ ಭಾರತೀಯ ಜನತಾ ಪಕ್ಷದ ಮಾಧ್ಯಮ ಘಟಕದ ಮುಖ್ಯಸ್ಥ ಲೋಕೇಂದ್ರ ಪರಾಶರ್ ವಿರುದ್ಧ ರಾಯ್ ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.