ಚಿಕ್ಕಮಗಳೂರು – ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕರೆ ನೀಡಿರೋ ಭಾರತ್ ಬಂದ್‍ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆ ಇದೆ. ಬಂದ್‍ಗೆ ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ರೈತ ಸಂಘ, ಆಟೋ ಸಂಘ, ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿವೆ. ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಜಿಲ್ಲಾದ್ಯಂತ ಯಾವುದೇ ಆಟೋ, ಟ್ಯಾಕ್ಸಿ, ಬಸ್‍ಗಳು ರಸ್ತೆಗೆ ಇಳಿಯುವುದಿಲ್ಲ. ಅಂಗಡಿ-ಮುಗ್ಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಬಾಗಿಲು ಮುಚ್ಚಿ ಬಂದ್‍ಗೆ ಬೆಂಬಲ ಸೂಚಿಸುವಂತೆ ಪ್ರತಿಭಟನಾನಿರತರು ವರ್ತಕರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು. ಮುಂಜಾಗೃತ ಕ್ರಮವಾಗಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ತೈಲ ಬೆಲೆ ಏರಿಕೆ ಖಂಡಿಸಿ ಜಿಲ್ಲೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ










