ಭಾರತ್ ಬಂದ್-ಸರ್ಕಾರಿ ಬಸ್‍ಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ…

236
firstsuddi

ಮಡಿಕೇರಿ : ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ, ನಗರದ ಹೊರವಲಯದ ಚೈನ್ ಗೇಟ್ ಬಳಿ ಕೆಲವು ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್ ಇಂದು ಬೆಳಿಗ್ಗೆ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಲ ದುಷ್ಕರ್ಮಿಗಳು ಬಸ್‍ಗೆ ಕಲ್ಲು ತೂರಿದ್ದು, ಪರಿಣಾಮ ಬಸ್‍ನ ಮುಂಬಾಗದ ಗ್ಲಾಸ್‍ಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಈ ವೇಳೆ ಬಸ್ಸಿನಲ್ಲಿ ಯಾರೂ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಹಿಂಸಾತ್ಮಕ ಘಟನೆ ನಡೆದಿಲ್ಲ. ಈ ಕುರಿತು ಬಸ್ ಚಾಲಕ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.