ಭಾರತ-ಆಸ್ಟ್ರೇಲಿಯಾ ಟಿ20 ; ಟಿಕೆಟ್​ಗಾಗಿ ನೂಕುನುಗ್ಗಲು, ನಾಲ್ವರಿಗೆ ಗಾಯ…

64
firstsuddi

ಹೈದರಾಬಾದ್ : ಸಿಕಂದರಾಬಾದ್ ಜಿಮ್ಖಾನಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ 20 ಪಂದ್ಯದ ಟಿಕೆಟ್ ಗಾಗಿ ನೂಕುನುಗ್ಗಲು ಉಂಟಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಸೆ.25 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಂದು ಜಿಮ್ಖಾನಾ ಮೈದಾನದಲ್ಲಿ ಟಿಕೆಟ್ ಮಾರಾಟ ನಡೆಯುತ್ತಿತ್ತು. ಟಿಕೆಟ್ ಖರೀದಿಗಾಗಿ ಸಾವಿರಾರು ಅಭಿಮಾನಿಗಳು ಜಿಮ್ಖಾನಾ ಮೈದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿದೆ.

ಈ ಹಿನ್ನಲೆಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.