ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ…

169
firstsuddi

ನವದೆಹಲಿ : ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ದೆಹಲಿಯ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಪಿಲ್ ದೇವ್ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಹರಿಯಾಣ ಹರಿಕೇನ್ ಎಂದೇ ಹೆಸರುವಾಸಿಯಾಗಿದ್ದ ಕಪಿಲ್ ದೇವ್ ಅವರು ಕ್ರಿಕೆಟ್‍ನಲ್ಲಿ ಭಾರತದ ಪರವಾಗಿ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್, ಹಾಗೂ 434 ವಿಕೆಟ್‍ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್ ಪಡೆದಿದ್ದರು. ಅಲ್ಲದೇ 1983ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಅನ್ನು ಭಾರತಕ್ಕೆ ಗೆದ್ದುಕೊಟ್ಟ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.