ಪಟಿಯಾಲ( ಪಂಜಾಬ್) : ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾರ್ಚ್ 17 ರಂದು ಐದನೇ ಏಕದಿನ ಪಂದ್ಯದಲ್ಲಿ ಗಾಯಗೊಂಡ ಬಳಿಕ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಸರಣಿಯಲ್ಲಿ ಹರ್ಮನ್ ಪ್ರೀತ್ ಕೌರ್ ಅವರು ಭಾಗಿಯಾಗಿರಲಿಲ್ಲ. ಜ್ವರ ಮತ್ತು ತೀವ್ರ ಶೀತದಿಂದ ಬಳಲುತ್ತಿದ್ದ ಕೌರ್ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ವರದಿ ಬಂದಿದ್ದು, ಅದರಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ. ಕೋವಿಡ್ ಸೋಂಕಿಗೆ ತುತ್ತಾಗಿರುವ ಹರ್ಮನ್ ಪ್ರೀತ್ ಕೌರ್ ಅವರು ಮನೆಯಲ್ಲೇ ಸ್ವತಃ ಹೋಮ್ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ.










