ಭಾರಿ ಕುತೂಹಲ ಮೂಡಿಸಿದ ಬಿ.ಎಲ್ ಸಂತೋಷ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿ…

212
firstsuddi

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಹಲವು ವದಂತಿಗೆ ಕಾರಣವಾಗಿದೆ. ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ 11 ಶಾಸಕರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದು, ಆದರೆ ಯಾರಿಗೆ ಯಾವಾ ಖಾತೆ ನೀಡಬೇಕು ಎಂದು ಬಿಜೆಪಿ ನಾಯಕರಲ್ಲಿ ಗೊಂದಲ ಸೃಷ್ಠಿಯಾಗಿದ್ದು, ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಈ ವೇಳೆ ಈ ಗೊಂದಲಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪ್ರವೇಶ ಮಾಡಿದ್ದು, ಇಂದು ಬೆಳ್ಳಂಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಯಾರಿಗೆ ಯಾವ ಖಾತೆ ಕೊಡಬೇಕು ಎಂದು ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.