ಭಾರಿ ಮಳೆಗೆ ಕುಸಿದು ಬಿದ್ದ ಮನೆ – ತಂದೆ-ಮಗ ಸಾವು…

105
firstsuddi

ಚಿಕ್ಕಬಳ್ಳಾಪುರ : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆ ಕುಸಿದು ಬಿದ್ದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಂದೆ ರವಿಕುಮಾರ್ ಹಾಗೂ ಮಗ ರಾಹುಲ್ ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸಿದ್ದು, ಭಾರಿ ಮಳೆಗೆ ಮನೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಮುನಿರಾಜಮ್ಮ ಹಾಗೂ ಮಗಳು ರುಚಿತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.