ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು…

135
firstsuddi

ಕೋಲಾರ : ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಹರೀಶ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ತೇವಗೊಂಡಿದ್ದ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ಬಾಲಕ ಹರೀಶ್ ಮೃತಪಟ್ಟಿದ್ದು, ತಾಯಿ ಆನಂದಮ್ಮ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.