ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ದೋಷಿಗಳು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಇಂದು ಅಂತಿಮ ತೀರ್ಪು ಪ್ರಕಟಿಸಿದ್ದಾರೆ.
ಉದ್ಯಮಿ ಭಾಸ್ಕರ್ ಶೆಟ್ಟಿ(52)ಅವರನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ್ದ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದು, ಎ4 ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.










