ಭೀಕರ ಅಪಘಾತ – ಒಂದೇ ಕುಟುಂಬದ 6 ಮಂದಿ ಸಾವು…

61
firstsuddi

ಯಾದಗಿರಿ : ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಮತ್ತು ಉಮೇಜಾ (6ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾದಲ್ಲಿ ಮಗಳ ಜವಳ ಕಾರ್ಯಕ್ರಮ ಮಾಡಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುವಾಗ ದುರಂತ ಸಂಭವಿಸಿದೆ.
ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.