ಭೀಕರ ಅಪಘಾತ ; ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ…

51
firstsuddi

ಬೆಳಗಾವಿ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಮೃತರನ್ನು ಯಲ್ಲಾಪುರದ ನಿವಾಸಿ ವಾಸಿಂ ಖಾನ್ (40), ಸಯ್ಯದ್ ಇಸ್ಮಾಯಿಲ್ (65), ಸುಶೀಲಾ ಫರ್ನಾಂಡಿಸ್ (60) ಎಂದು ಗುರುತಿಸಲಾಗಿದೆ. ಕಾರು ಯಲ್ಲಾಪುರದಿಂದ ಬೆಳಗಾವಿಗೆ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಕಾರನಲ್ಲಿದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.